
ಎಸ್ಎಸ್ಎಲ್ಸಿ ಬಳಿಕ ಮಾಡಬಹುದಾದ ಟಾಪ್ 5 ಕೋರ್ಸ್ಗಳು
August 19, 2022ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2023: ಹತ್ತು ವರ್ಷಗಳ ಶಾಲಾ ಶಿಕ್ಷಣವನ್ನು ರಾಜ್ಯ ಪಠ್ಯಕ್ರಮದಲ್ಲಿ ಪೂರೈಸಿದ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆಸಿ ಮುಂದಿನ ವಿದ್ಯಾಭ್ಯಾಸಕ್ಕೆ ಮುನ್ನುಡಿಯನ್ನು ಬರೆಯಲಾಗುತ್ತದೆ.
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಪರೀಕ್ಷಾ ಪ್ರಕ್ರಿಯೆಯಲ್ಲಿ ಸಾಕಷ್ಟು ಬದಲಾವಣೆಗಳನ್ನು ತಂದಿದ್ದು, ಅನೇಕ ಚಟುವಟಿಕೆಗಳು ಗಣಕೀಕರಣಗೊಳ್ಳುವುದರ ಮೂಲಕ ಡಿಜಿಟಲೀಕರಣದತ್ತ ದಾಪುಗಾಲಿಡುತ್ತಿದೆ.
ಆನ್‌ಲೈನ್ ಮುಖಾಂತರ ವಿದ್ಯಾರ್ಥಿಗಳ ನೋಂದಣಿಯಿಂದ ಆರಂಭಿಸಿ ಪ್ರವೇಶಪತ್ರ ವಿತರಣೆ, ಮಂಡಳಿ ಸರ್ವರ್‌ಗೆ ಮೌಲ್ಯಮಾಪನಗೊಂಡ ಅಂಕಗಳ ನೇರ ದಾಖಲೀಕರಣ, ಫಲಿತಾಂಶ ಪ್ರಕಟಣೆ, ಶಾಲಾ ಲಾಗಿನ್ ಫಲಿತಾಂಶ ಪಟ್ಟಿಗಳ ರವಾನೆ, ಉತ್ತರ ಪತ್ರಿಕೆಗಳ ಛಾಯಾಪ್ರತಿ ಪಡೆಯುವುದು, ಮರುಮೌಲ್ಯಮಾಪನ, ವಲಸೆ ಪ್ರಮಾಣಪತ್ರ ಪಡೆಯುವಿಕೆಯನ್ನು ನಡೆಸಲಾಗುತ್ತದೆ. ಅಂಕಪಟ್ಟಿಗಳ ನೈಜತೆ ಪರಿಶೀಲನೆ ಈ ಎಲ್ಲಾ ಕಾರ್ಯಚಟುವಟಿಕೆಗಳನ್ನು ಆನ್‌ಲೈನ್ ಮೂಲಕ ನಿರ್ವಹಿಸಲಾಗುತ್ತದೆ. ಪೂರಕವಾಗಿ ಅಗತ್ಯವಿರುವ ಮಾಹಿತಿಯನ್ನು ಸರ್ಕಾರಿ ಆದೇಶಗಳು ಹಾಗೂ ಮಂಡಳಿಯ ಸುತ್ತೋಲೆಗಳ ಮೂಲಕ ನೀಡಲಾಗುತ್ತದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರತಿ ವರ್ಷ ಏಪ್ರಿಲ್ ಮತ್ತು ಜೂನ್ ತಿಂಗಳಲ್ಲಿ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನ ರಹಿತ ಶಾಲಾ ಕಾಲೇಜುಗಳಲ್ಲಿ ಹತ್ತನೇ ತರಗತಿಯಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಹಾಗೂ ಖಾಸಗಿ ಅಭ್ಯರ್ಥಿಗಳಿಗೆ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ನಡೆಸುತ್ತಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ (Secondary school leaving Certificate) ಪರೀಕ್ಷೆಯನ್ನು ನಡೆಸುತ್ತದೆ. ಸಾಮಾನ್ಯವಾಗಿ ಮುಖ್ಯ ಪರೀಕ್ಷೆಯನ್ನು ಮಾರ್ಚ್/ಏಪ್ರಿಲ್ ತಿಂಗಳಲ್ಲಿ ನಡೆಸಲಾಗುತ್ತದೆ. ಅನುತ್ತೀರ್ಣರಾದ ವಿದ್ಯಾರ್ಥಿಗಳು ವಿದ್ಯಾಭ್ಯಾಸವನ್ನು ಮುಂದುವರಿಸಲು ಅನುಕೂಲವಾಗುವ ಸದುದ್ದೇಶದಿಂದ ಪೂರಕ ಪರೀಕ್ಷೆಯನ್ನು ಜೂನ್ ತಿಂಗಳಲ್ಲಿ ನಡೆಸಲಾಗುತ್ತಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಾಯ್ದೆ-1966ರ ChapterVI ನಿಯಮ-37(i) (ii) ಮತ್ತು Annexure-III ನಿಯಮ-7ರನ್ವಯ, ರಾಜ್ಯದ ಅಧಿಕೃತ ಪ್ರೌಢ ಶಾಲೆಯಲ್ಲಿ 8 ರಿಂದ 10ನೇ ತರಗತಿಯವರೆಗೆ ವಿದ್ಯಾರ್ಥಿ ವ್ಯಾಸಂಗ ಮಾಡಿರಬೇಕು ಇಂತಹ ಪದ್ಯಾರ್ಥಿಯನ್ನು ಶಾಲಾ ವಿದ್ಯಾರ್ಥಿಯೆಂದು ಪರಿಗಣಿಸಲಾಗುತ್ತದೆ.
2022-2023ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ರಾಜ್ಯದ ಸರ್ಕಾರಿ ಮತ್ತು ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನ ರಹಿತ ಶಾಲಾ ಕಾಲೇಜುಗಳಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳನ್ನು ಶಾಲಾ ಅಭ್ಯರ್ಥಿಗಳೆಂದು ಪರಿಗಣಿಸಿದೆ. ಈ ವರ್ಗದ ಸಂಕೇತ ಸಿ.ಸಿ.ಇ.-ಆರ್.ಎಫ್.(CCERF) ಎಂದು ವರ್ಗೀಕರಿಸಿದೆ.
• ಶಾಲಾಕಾಲೇಜುಗಳಲ್ಲಿ ವ್ಯಾಸಂಗ ಮಾಡಿ CCE ಪದ್ಧತಿಯಲ್ಲಿ ಪರೀಕ್ಷೆಗೆ ಕುಳಿತು ಅನುತ್ತೀರ್ಣರಾಗಿದ್ದು, ಪುನಃ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ತೆಗೆದುಕೊಳ್ಳುವ ಅರ್ಹ ಅಭ್ಯರ್ಥಿಗಳನ್ನು CCERR ಎಂಬುದಾಗಿ ವರ್ಗೀಕರಿಸಲಾಗಿದೆ.
• ಶಾಲಾ/ಕಾಲೇಜುಗಳಲ್ಲಿ ವ್ಯಾಸಂಗ ಮಾಡಿ ಏಪ್ರಿಲ್ 2011ಕ್ಕಿಂತ ಪೂರ್ವದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಗಳಲ್ಲಿ ಕುಳಿತು ಅನುತ್ತೀರ್ಣರಾಗಿದ್ದು, ಪುನ: ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ತೆಗೆದುಕೊಳ್ಳುವ ಅರ್ಹ ಅಭ್ಯರ್ಥಿಗಳನ್ನು NSR ಎಂಬುದಾಗಿ ವರ್ಗೀಕರಿಸಲಾಗಿದೆ.
ಈ NSR ಅಭ್ಯರ್ಥಿಗಳನ್ನು ಕೆಳಕಂಡಂತೆ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ.
1) 2002 ಮತ್ತು ಅದಕ್ಕಿಂತ ಹಿಂದಿನ ವರ್ಷಗಳ ಪರೀಕ್ಷೆಗಳಲ್ಲಿ ಅನುತ್ತೀರ್ಣರಾದ ಅಭ್ಯರ್ಥಿಗಳು.
2) 2003 ರಿಂದ ಜೂನ್ 2010ರವರೆಗಿನ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿರುವ ಅಭ್ಯರ್ಥಿಗಳು.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಕಾಯ್ದೆ-1966ರ ChapterVI ನಿಯಮ-39(1)(iii)(iv), 40,42,43 ಮತ್ತು Annexure-III ನಿಯಮ-9(a)(b),10,11 ರನ್ವಯ, ಖಾಸಗಿ ಅಭ್ಯರ್ಥಿಯಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಹಾಜರಾಗಬಹುದು, ಖಾಸಗಿ ಅಭ್ಯರ್ಥಿಯಾಗಿ ಹಾಜರಾಗಲು ಬಯಸುವ ಅಭ್ಯರ್ಥಿಗಳು ಆಯಾ ವರ್ಷದ ಮಾರ್ಚ್-1ನೇ ತಾರೀಖಿಗೆ 15 ವರ್ಷ ವಯೋಮಿತಿ ಹೊಂದಿರಬೇಕು ಹಾಗೂ ಇತರ ಅರ್ಹತೆಗಳನ್ನು ಹೊಂದಿರಬೇಕು. ಈ ವರ್ಗದ ಸಂಕೇತ ಸಿ.ಸಿ.ಇ.ಪಿ.ಎಫ್ (CCEPF) ಎಂದು ವರ್ಗೀಕರಿಸಿದೆ.
CCE ಪದ್ಧತಿಯಲ್ಲಿ ಪರೀಕ್ಷೆಗೆ ಕುಳಿತು ಅನುತ್ತೀರ್ಣರಾಗಿದ್ದು, ಪುನಃ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ತೆಗೆದುಕೊಳ್ಳುವ ಅರ್ಹ ಖಾಸಗಿ ಅಭ್ಯರ್ಥಿಗಳನ್ನು CCEPR ಎಂಬುದಾಗಿ ವರ್ಗೀಕರಿಸಲಾಗಿದೆ.
2011ಕ್ಕಿಂತ ಪೂರ್ವದಲ್ಲಿ ಎಸ್.ಎಸ್.ಎಲ್.ಸಿ, ಪರೀಕ್ಷೆಗಳಲ್ಲಿ ಕುಳಿತು ಅನುತ್ತೀರ್ಣರಾಗಿದ್ದು, ಪುನಃ ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ತೆಗೆದುಕೊಳ್ಳುವ ಅರ್ಹ ಖಾಸಗಿ ಅಭ್ಯರ್ಥಿಗಳನ್ನು NSPR ಎಂಬುದಾಗಿ ವರ್ಗೀಕರಿಸಲಾಗಿದೆ.
ಈ NSPR ಅಭ್ಯರ್ಥಿಗಳನ್ನು ಕೆಳಕಂಡಂತೆ ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ:
ಏಪ್ರಿಲ್ 2011 ಮತ್ತು ನಂತರದ ಅವಧಿಗಳಲ್ಲಿ ಪರೀಕ್ಷೆಗೆ ಕುಳಿತ ವಿದ್ಯಾರ್ಥಿಗಳು ಸತತ 06 ಪ್ರಯತ್ನಗಳಲ್ಲಿ ತೇರ್ಗಡೆಯಾಗಬೇಕು, ಇಲ್ಲವಾದಲ್ಲಿ, ಖಾಸಗಿ ಅಭ್ಯರ್ಥಿಗಳಾಗಿ ಪುನಃ ಎಲ್ಲಾ 06 ವಿಷಯಗಳಿಗೆ ಪರೀಕ್ಷೆ ಬರೆಯಬೇಕಾಗುತ್ತದೆ. ಇವರೂ ಸಹ ಖಾಸಗಿ ಅಭ್ಯರ್ಥಿಗಳಿಗೆ ಅನುಸರಿಸುವ ವಿಧಿವಿಧಾನಗಳನ್ನು ಪಾಲಿಸಬೇಕಾಗುತ್ತದೆ.
ಸರ್ಕಾರಿ ಆದೇಶದ ಸಂಖ್ಯೆ:ಇಡಿ.156,ಮಾಹಿತಿ.2014, ದಿನಾಂಕ:26.06.2014 ರನ್ವಯ, 2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಮಾರ್ಚ್/ಏಪ್ರಿಲ್-2023 ರಲ್ಲಿ ನಡೆಯುವ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ನಿರಂತರ ಹಾಗೂ ಸಮಗ್ರ ಮೌಲ್ಯಮಾಪನ(ಸಿ.ಸಿ.ಇ) ಪದ್ಧತಿಯನ್ನು ರಾಜ್ಯದ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರೌಢಶಾಲೆಗಳಲ್ಲಿ ಮುಂದುವರಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಿರಂತರ ವಿಧಿವಿಧಾನಗಳನ್ನು ಕೆಳಕಂಡಂತೆ ವಿವರಿಸಲಾಗಿದೆ ಹಾಗೂ ಸಮಗ್ರ ಮೌಲ್ಯಮಾಪನ(ಸಿ.ಸಿ.ಇ.) ಅಳವಡಿಸಲಾಗಿದೆ.
1. ವಿದ್ಯಾರ್ಥಿಗಳನ್ನು ಪ್ರಗತಿಶೀಲರನ್ನಾಗಿಸಲು, ಸರ್ವತೋಮುಖ ಅಭಿವೃದ್ಧಿಗೆ ಪ್ರೇರೇಪಿಸಲು ಶಿಕ್ಷಣ ಮಹತ್ತರವಾದ ಪಾತ್ರ ವಹಿಸುತ್ತದೆ. ವಿದ್ಯಾರ್ಥಿಗಳಲ್ಲಿ ಗುಣಮಟ್ಟದ ಕಲಿಕೆ ಉಂಟಾಗಬೇಕಾದಲ್ಲಿ ಅವರಲ್ಲಿ ಶಿಸ್ತು, ಕಾರ್ಯತತ್ಪರತೆ, ಸೃಜನಶೀಲತೆ, ಕಲಾತ್ಮಕತೆಗಳಿಗೆ ಶಿಕ್ಷಣ ಒತ್ತು ನೀಡಬೇಕಾಗಿದೆ. ಇದನ್ನು ಸಾಧಿಸಲು ಪಠ್ಯ ವಿಷಯಗಳ ಮೌಲ್ಯಮಾಪನದ ಜೊತೆಗೆ ಸಹಪಠ್ಯ ಚಟುವಟಿಕೆಗಳ ಮೌಲ್ಯಮಾಪನದ ಅಗತ್ಯತೆ ಇರುವುದನ್ನು ಮನಗಂಡಿದೆ.
2. ಶೈಕ್ಷಣಿಕ ವರ್ಷದಲ್ಲಿ ವಿಷಯವಾರು ಒಟ್ಟು 04 ರೂಪಣಾತ್ಮಕ ಮೌಲ್ಯಮಾಪನಗಳನ್ನು ಮಾಡಲಾಗುತ್ತಿದ್ದು, ಪ್ರತಿ ರೂಪಣಾತ್ಮಕ ಮೌಲ್ಯಮಾಪನದಲ್ಲಿ(ಎರಡು ಚಟುವಟಿಕೆಗಳನ್ನು) ಒಂದು ಕಿರು ಪರೀಕ್ಷೆಯನ್ನು ನಡೆಸಲಾಗುತ್ತದೆ. ಒಟ್ಟಾರೆ 04 ರೂಪಣಾತ್ಮಕ ಮೌಲ್ಯಮಾಪನಗಳಿಂದ 08 ಚಟುವಟಿಕೆಗಳು ಹಾಗೂ 04 ಕಿರು ಪರೀಕ್ಷೆಗಳನ್ನು ನಡೆಸಲಾಗುತ್ತದೆ.
3. 2014-15ನೇ ಸಾಲಿನಿಂದ ಜಾರಿಗೆ ಬರುವಂತೆ(2015ನೇ ಏಪ್ರಿಲ್ ಪರೀಕ್ಷೆಯಿಂದ) ಈ ಕೆಳಕಂಡ ಮಾನದಂಡಗಳನ್ನು ಆಧರಿಸಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ನಿರಂತರ ಹಾಗೂ ಸಮಗ್ರ ಮೌಲ್ಯಮಾಪನ ಪದ್ಧತಿ(ಸಿ.ಸಿ.ಇ.)ಯನ್ನು ಅಳವಡಿಸಿ ಏಪ್ರಿಲ್-2015ರಲ್ಲಿ ಹಾಗೂ ತದನಂತರದಲ್ಲಿ ನಡೆಸುವ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶವನ್ನು (ಮುಂಬರುವ ಎಸ್.ಎಸ್.ಎಲ್.ಸಿ. ಪರೀಕ್ಷಾ ಫಲಿತಾಂಶಗಳು) ಅಂಕಗಳು ಹಾಗೂ ಶ್ರೇಣಿಗಳ ಆಧಾರದ ಮೇರೆಗೆ ಪ್ರಕಟಿಸಲಾಗುತ್ತದೆ.
ಪ್ರ. 1: ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಯಾವೆಲ್ಲಾ ಮಾಧ್ಯಮಗಳಲ್ಲಿ ಬರೆಯಬಹುದು?
ಉತ್ತರ: ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ಕನ್ನಡ, ಆಂಗ್ಲ, ತಮಿಳು, ತೆಲುಗು, ಮರಾಠಿ, ಉರ್ದು ಹಾಗೂ ಹಿಂದಿ ಈ ಏಳು (07) ಮಾಧ್ಯಮಗಳಲ್ಲಿ ನಡೆಸಲಾಗುತ್ತಿದೆ. ವಿದ್ಯಾರ್ಥಿಗಳು ಯಾವುದಾದರು ಒಂದು ಮಾಧ್ಯಮವನ್ನು ಆಯ್ಕೆ ಮಾಡಿಕೊಂಡು ಪರೀಕ್ಷೆಯನ್ನು ಬರೆಯಬಹುದು.
ಪ್ರ. 2: ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಪರೀಕ್ಷಾ ಶುಲ್ಕವನ್ನು ವಿದ್ಯಾರ್ಥಿಗಳು ಪಾವತಿಸಬೇಕೇ?
ಉತ್ತರ: ಹೌದು. ಪ್ರಥಮ ಬಾರಿಗೆ ಪರೀಕ್ಷೆಗೆ ಹಾಜರಾಗುವ ಶಾಲಾ ವಿದ್ಯಾರ್ಥಿಗಳು (CCERF) ಮತ್ತು ಪ್ರಥಮ ಬಾರಿಗೆ ಪರೀಕ್ಷೆಗೆ ಹಾಜರಾಗುತ್ತಿರುವ ಖಾಸಗಿ ಅಭ್ಯರ್ಥಿಗಳು (CCEPF) ಎಲ್ಲರೂ ಪರೀಕ್ಷಾ ಶುಲ್ಕ ರೂ.462 + ರೂ.21 (ಲ್ಯಾಮಿನೇಷನ್ ಶುಲ್ಕ) ಒಟ್ಟು ರೂ.483 (ಪ್ರತಿ ವಿದ್ಯಾರ್ಥಿಗೆ) ಪಾವತಿಸಬೇಕು.
ಪ್ರ. 3: ಲ್ಯಾಮಿನೇಷನ್ ಶುಲ್ಕದಿಂದ ವಿದ್ಯಾರ್ಥಿಗಳಿಗೆ ವಿನಾಯಿತಿ ನೀಡಲಾಗುತ್ತದೆಯೇ?
ಉತ್ತರ: ಇಲ್ಲ. ಪ್ರಥಮ ಬಾರಿಗೆ ಪರೀಕ್ಷೆಗೆ ಕುಳಿತುಕೊಳ್ಳುವ ಎಲ್ಲಾ ವರ್ಗದ ವಿದ್ಯಾರ್ಥಿಗಳು ಅಂಕಪಟ್ಟಿಯ ಲ್ಯಾಮಿನೇಷನ್ ಶುಲ್ಕ ರೂ. 21 (ರೂ.ಇಪ್ಪತ್ತೊಂದು ಮಾತ್ರ) ಗಳನ್ನು ಕಡ್ಡಾಯವಾಗಿ ಪಾವತಿಸಬೇಕು. ಯಾವುದೇ ವಿದ್ಯಾರ್ಥಿಗೂ ಲ್ಯಾಮಿನೇಷನ್ ಶುಲ್ಕ ಪಾವತಿಯಿಂದ ವಿನಾಯಿತಿ ಇರುವುದಿಲ್ಲ. ಆದರೆ ಪುನರಾರ್ವತಿತ ವಿದ್ಯಾರ್ಥಿಗಳು ಪುನಃ ಲ್ಯಾಮಿನೇಷನ್ ಶುಲ್ಕ ಪಾವತಿಸುವ ಅಗತ್ಯವಿಲ್ಲ.
ಪ್ರ. 4: ರಾಜ್ಯ ಪ್ರಠ್ಯಕ್ರಮಕ್ಕೆ ವಲಸೆ ಬರುವ ವಿದ್ಯಾರ್ಥಿಗಳು ನೋಂದಣಿ ಶುಲ್ಕ ಪಾವತಿಸಬೇಕೇ?
ಉತ್ತರ: ಹೌದು. ಕೇಂದ್ರ ಪಠ್ಯಕ್ರಮ ಸಿ.ಬಿ.ಎಸ್.ಇ, ಐಸಿಎಸ್‌ಇ ಹಾಗೂ ಹೊರ ರಾಜ್ಯ ಪಠ್ಯಕ್ರಮಗಳಿಂದ ರಾಜ್ಯ ಪಠ್ಯಕ್ರಮಕ್ಕೆ ವಲಸೆ ಬರುವ ವಿದ್ಯಾರ್ಥಿಗಳು ಸಂಬಂಧಿಸಿದ ಜಿಲ್ಲಾ ಉಪ ನಿರ್ದೇಶಕರಿಗೆ ರೂ.1000+ರೂ.10= ಒಟ್ಟು ರೂ.1010 ಗಳ ನೋಂದಣಿ ಶುಲ್ಕ ಸಲ್ಲಿಸಿ ರಾಜ್ಯ ಪಠ್ಯಕ್ರಮಕ್ಕೆ ನೋಂದಾಯಿಸಿಕೊಳ್ಳುವುದು ಕಡ್ದಾಯವಾಗಿರುತ್ತದೆ. ರಾಜ್ಯ ಪಠ್ಯಕ್ರಮದಲ್ಲಿ ಅಭ್ಯಾಸ ಮಾಡಲು ಜಿಲ್ಲಾ ಉಪನಿರ್ದೇಶಕರ ಪೂರ್ವಾನುಮತಿ ಪಡೆಯುವುದು ಕಡ್ಡಾಯ.
ಪ್ರ. 5: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ತೇರ್ಗಡೆಯಾಗಲು ಎಷ್ಟು ಪ್ರಯತ್ನಗಳನ್ನು ನೀಡಲಾಗುತ್ತದೆ?
ಉತ್ತರ: ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಕುಳಿತ ವಿದ್ಯಾರ್ಥಿಗಳು ಸತತ 6 ಪ್ರಯತ್ನಗಳ ಅವಧಿಯಲ್ಲಿ ಪರೀಕ್ಷೆ ಬರೆದು ಅನುತ್ತೀರ್ಣನಾಗಿದ್ದರೆ, ಇಂತಹ ವಿದ್ಯಾರ್ಥಿಯು ತೇರ್ಗಡೆ ಹೊಂದಿದ್ದ ವಿಷಯಗಳನ್ನು ಸಹ ಪರಿಗಣಿಸಲಾಗುವುದಿಲ್ಲ. ಈ ವಿದ್ಯಾರ್ಥಿಗಳು ಹೊಸದಾಗಿ ಎಲ್ಲಾ 06 ವಿಷಯಗಳನ್ನು ತೆಗೆದುಕೊಳ್ಳಬೇಕು ಹಾಗೂ ಖಾಸಗಿ ವಿದ್ಯಾರ್ಥಿಯಾಗಿ ಪರೀಕ್ಷೆಗೆ ಕುಳಿತುಕೊಳ್ಳಬೇಕಾಗುತ್ತದೆ. ಖಾಸಗಿ ಅಭ್ಯರ್ಥಿ ಪರೀಕ್ಷೆಗೆ ಕುಳಿತುಕೊಳ್ಳಲು ವಿಧಿಸಿರುವ ಷರತ್ತುಗಳನ್ನು ಪಾಲಿಸಬೇಕು.
ಕರ್ನಾಟಕ ಎಸ್.ಎಸ್.ಎಲ್.ಸಿ ಪರೀಕ್ಷೆ 2023: ಅರ್ಹತೆ ಕುರಿತು ಎಲ್ಲಾ ಅಗತ್ಯ ಮಾಹಿತಿಯನ್ನು ನಿಮಗೆ ಒದಗಿಸಲಾಗಿದೆ. ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ಯೋಜಿಸುತ್ತಿರುವ ಅಭ್ಯರ್ಥಿಗಳು Embibe ನಲ್ಲಿ ಎಸ್‌ಎಸ್ಎಲ್‌ಸಿ ಲರ್ನ್ ನೋಡಿ. ನಿಮ್ಮ ಪಠ್ಯಕ್ರಮಕ್ಕೆ ಮ್ಯಾಪ್ ಮಾಡಲಾದ 3D ವಿಡಿಯೋಗಳನ್ನು ನೋಡುತ್ತಾ ಪಠ್ಯಗಳನ್ನು ಕಲಿಯಿರಿ. ಬಳಿಕ ಅಣಕು ಟೆಸ್ಟ್ ತೆಗೆದುಕೊಂಡು ನೀವು ಎಲ್ಲಿ ತಪ್ಪು ಮಾಡುತ್ತಿದ್ದೀರಿ ಎಂಬುದನ್ನು ಗುರುತಿಸಿಕೊಳ್ಳಿ. ವಾಸ್ತವಿಕ ಪರೀಕ್ಷೆಗಿಂತ ಮುನ್ನ ನಿಮ್ಮ ತಪ್ಪುಗಳನ್ನು ಗುರುತಿಸಿಕೊಳ್ಳುವುದು ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈಯುವುದರ ಮೊದಲ ಹೆಜ್ಜೆಯಾಗಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2023 ಕುರಿತ ಇತ್ತೀಚಿನ ಸುದ್ದಿ ಮತ್ತು ಅಪ್‌ಡೇಟ್‌ಗಳಿಗಾಗಿ Embibe ಪುಟಕ್ಕೆ ಭೇಟಿ ಮಾಡುತ್ತಿರಿ. “ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ 2023: ಅರ್ಹತೆ ಮಾಹಿತಿ” ಕುರಿತ ಈ ಲೇಖನವು ನಿಮಗೆ ಉಪಯುಕ್ತಕರವಾಗಿತ್ತು ಎಂದು ನಾವು ಭಾವಿಸುತ್ತೇವೆ. ಇಂತಹ ಇನ್ನಷ್ಟು ಕಂಟೆಂಟ್‌ಗಾಗಿ Embibe ಪುಟಕ್ಕೆ ಭೇಟಿ ಮಾಡುತ್ತಿರಿ.