
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿಯ ಪಿಯುಸಿಯಲ್ಲಿ ಲಭ್ಯವಿರುವ ವಿವಿಧ ಸಂಯೋಜನೆಗಳ ಮಾಹಿತಿ
August 19, 2022ಪ್ರಥಮ ಪಿಯುಸಿ ಪ್ರಶ್ನೆ ಪತ್ರಿಕೆಗಳು 2022-23: ಒಂದು ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಲು ನಿರಂತರ ಅಭ್ಯಾಸದೊಂದಿಗೆ ಪರೀಕ್ಷೆಯ ರೂಪುರೇಷೆಯನ್ನು ಅರ್ಥಮಾಡಿಕೊಳ್ಳುವುದೂ ಸಹ ಮುಖ್ಯ. ಈ ನಿಟ್ಟಿನಲ್ಲಿ ಹಳೆಯ ವರ್ಷದ ಪ್ರಶ್ನೆ ಪತ್ರಿಕೆಗಳು ಮತ್ತು ಮಾದರಿ ಪ್ರಶ್ನೆ ಪತ್ರಿಕೆಗಳು ವಿದ್ಯಾರ್ಥಿಗಳಿಗೆ ತುಂಬಾ ಉಪಯುಕ್ತವಾಗುತ್ತವೆ.
ಈ ಕಾರಣಕ್ಕಾಗಿಯೇ, ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ಪ್ರಥಮ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಉತ್ತರಗಳೊಂದಿಗೆ ಪಿಡಿಎಫ್ ರೂಪದಲ್ಲಿ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೂ ಮುನ್ನ ಬಿಡುಗಡೆ ಮಾಡುತ್ತದೆ. ಪ್ರಶ್ನೆ ಪತ್ರಿಕೆಗಳ ಮಾದರಿ, ಪರೀಕ್ಷೆಯ ರಚನೆ ಮತ್ತು ಪ್ರಶ್ನೆಗಳ ಪ್ರಕಾರಗಳನ್ನು ಅರ್ಥಮಾಡಿಕೊಳ್ಳಲು ಅಭ್ಯರ್ಥಿಗಳಿಗೆ ಸಹಾಯ ಮಾಡುವುದು ಈ ಪ್ರಶ್ನೆ ಪತ್ರಿಕೆಗಳ ಮುಖ್ಯ ಉದ್ದೇಶವಾಗಿದೆ.
ಈ ಪ್ರಶ್ನೆ ಪತ್ರಿಕೆಗಳಿಗೆ ಉತ್ತರಿಸುವ ಮೂಲಕ, ಅಭ್ಯರ್ಥಿಗಳು ಪ್ರಶ್ನೆಗಳಿಗೆ ಉತ್ತರಿಸುವ ಕೌಶಲವನ್ನು ಉತ್ತಮಪಡಿಸಿಕೊಳ್ಳಬಹುದು. ಜೊತೆಗೆ, ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆಗಳ ಪ್ರವೃತ್ತಿಯನ್ನು ಅರ್ಥಮಾಡಿಕೊಳ್ಳುವುದೂ ಸಹ ಇದರಿಂದ ಸಾಧ್ಯವಾಗುತ್ತದೆ. ಈ ಜ್ಞಾನದಿಂದ ಪ್ರತಿ ವಿಷಯದಲ್ಲಿನ ಪ್ರಮುಖ ಟಾಪಿಕ್‌ಗಳನ್ನು ವಿದ್ಯಾರ್ಥಿಗಳು ಗುರುತಿಸಬಹುದು.
ಆದ್ದರಿಂದ, ನಿಮ್ಮ ಅಭ್ಯಾಸಕ್ಕೆ ಪೂರಕವಾಗುವಂತೆ ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಥಮ ಪಿಯುಸಿ ಪರೀಕ್ಷೆಯ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪಿಡಿಎಫ್ ರೂಪದಲ್ಲಿ ಡೌನ್‌ಲೋಡ್ ಮಾಡಲು ನಾವು ನೇರ ಲಿಂಕ್‌ಗಳನ್ನು ನಿಮಗೆ ಇಲ್ಲಿ ಒದಗಿಸಿದ್ದೇವೆ. ಉತ್ತಮ ಅಂಕಗಳೊಂದಿಗೆ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರೈಸಲು ಈ ಪ್ರಶ್ನೆ ಪತ್ರಿಕೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳಿ.
ನೇರವಾಗಿ ಪ್ರಶ್ನೆ ಪತ್ರಿಕೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳುವ ಮೊದಲು, ವಿದ್ಯಾರ್ಥಿಗಳು ಕರ್ನಾಟಕ ಪ್ರಥಮ ಪಿಯುಸಿ ಪರೀಕ್ಷೆಯ ಅವಲೋಕನವನ್ನು ಈ ಕೆಳಗೆ ನೋಡಬಹುದು:
ವಿವರಗಳು | ವಿವರಣೆಗಳು |
---|---|
ಪರೀಕ್ಷೆಯ ಹೆಸರು | ಕರ್ನಾಟಕ ಪ್ರಥಮ ಪಿಯುಸಿ ಪರೀಕ್ಷೆ |
ನಿರ್ವಹಿಸುವ ಮಂಡಳಿ | ಪದವಿ ಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ |
ಪರೀಕ್ಷೆಯ ವಿಧಾನ | ಆಫ್ಲೈನ್ |
ಅಧಿಕೃತ ವೆಬ್ಸೈಟ್ | ಲಿಂಕ್ |
ಕೋವಿಡ್-19 ಸಾಂಕ್ರಾಮಿಕ ರೋಗವು ಶೈಕ್ಷಣಿಕ ಚಟುವಟಿಕೆಗಳ ಮೇಲೆ ಪರಿಣಾಮ ಬೀರಿದ್ದರಿಂದ 2020-21ನೇ ಸಾಲಿನಲ್ಲಿ ಪ್ರಥಮ ಪಿಯುಸಿ ಪಠ್ಯಕ್ರಮವನ್ನು ಸಂಕ್ಷಿಪ್ತಗೊಳಿಸಲಾಗಿತ್ತು. ಈ ಸಂಕ್ಷಿಪ್ತ ಪಠ್ಯಕ್ರಮವನ್ನು ಆಧರಿಸಿದ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಈ ಕೆಳಗಿನ ಕೋಷ್ಟಕದಲ್ಲಿ ನೀಡಲಾಗಿದೆ. ಕೆಳಗಿನ ಲಿಂಕ್‌ಗಳನ್ನು ಕ್ಲಿಕ್ ಮಾಡುವ ಮೂಲಕ ಅಭ್ಯರ್ಥಿಗಳು ಪ್ರಶ್ನೆ ಪತ್ರಿಕೆಗಳನ್ನು ಪರಿಶೀಲಿಸಬಹುದು ಅಥವಾ ಡೌನ್‌ಲೋಡ್ ಮಾಡಬಹುದು:
ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆ ಕೋಶ 2020 ಕೆಳಗೆ ಪಟ್ಟಿ ಮಾಡಲಾಗಿದೆ:
ಪ್ರಥಮ ಪಿಯುಸಿ ಪ್ರಶ್ನೆ ಕೋಶ – PDF ಅನ್ನು ಡೌನ್‌ಲೋಡ್ ಮಾಡಿ |
---|
ಪ್ರಥಮ ಪಿಯುಸಿ ವ್ಯವಹಾರ ಅಧ್ಯಯನ ಪ್ರಶ್ನೆ ಬ್ಯಾಂಕ್ |
1 ನೇ ಪಿಯುಸಿ ಅರ್ಥಶಾಸ್ತ್ರ ಪ್ರಶ್ನೆ ಬ್ಯಾಂಕ್ |
1 ನೇ ಪಿಯುಸಿ ಲೆಕ್ಕಶಾಸ್ತ್ರ ಪ್ರಶ್ನೆ ಬ್ಯಾಂಕ್ |
2018-19ನೇ ಸಾಲಿನ ಕರ್ನಾಟಕ ಪ್ರಥಮ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಕೆಳಗೆ ಪಟ್ಟಿ ಮಾಡಲಾಗಿದೆ:
ಕರ್ನಾಟಕ ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಈ ಪುಟದಿಂದ ಡೌನ್‌ಲೋಡ್ ಮಾಡುವುದರ ಜೊತೆಗೆ, ವಿದ್ಯಾರ್ಥಿಗಳು ಕೆಳಗೆ ಪಟ್ಟಿ ಮಾಡಲಾದ ಹಂತಗಳನ್ನು ಅನುಸರಿಸುವ ಮೂಲಕ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಿಂದ ಪ್ರಥಮ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಡೌನ್‌ಲೋಡ್ ಮಾಡಬಹುದು:
1ನೇ ಹಂತ: ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ – ಲಿಂಕ್.
2ನೇ ಹಂತ: ಮುಖಪುಟದಲ್ಲಿ, “ವಿದ್ಯಾರ್ಥಿಗಳ ವಿಭಾಗ” ಟ್ಯಾಬ್ ಅನ್ನು ಕ್ಲಿಕ್ ಮಾಡಿ.
3ನೇ ಹಂತ: “I PU ಮಾದರಿ ಪ್ರಶ್ನೆ ಪತ್ರಿಕೆಗಳು” ಲಿಂಕ್ ಅನ್ನು ಕ್ಲಿಕ್ ಮಾಡಿ.
4ನೇ ಹಂತ: ನೀವು ಡೌನ್‌ಲೋಡ್ ಮಾಡಬೇಕಾದ ವರ್ಷದ ಲಿಂಕ್ ಅನ್ನು ಕ್ಲಿಕ್ ಮಾಡಿ.
5ನೇ ಹಂತ: ವಿಷಯಗಳ ಪಟ್ಟಿಯು ಪರದೆಯ ಮೇಲೆ ಕಾಣಿಸುತ್ತದೆ. ನೀವು ಡೌನ್‌ಲೋಡ್ ಮಾಡಬೇಕಾದ ವಿಷಯದ ಮೇಲೆ ಕ್ಲಿಕ್ ಮಾಡಿ.
6ನೇ ಹಂತ: ಪರದೆಯ ಮೇಲೆ ಪಿಡಿಎಫ್ ತೆರೆಯುತ್ತದೆ. ಡೌನ್‌ಲೋಡ್ ಲಿಂಕ್ ಅನ್ನು ಕ್ಲಿಕ್ ಮಾಡಿ ಮತ್ತು ಪಿಯುಸಿ ಪ್ರಶ್ನೆ ಪತ್ರಿಕೆಯು ನಿಮ್ಮ ಸಾಧನಕ್ಕೆ ಡೌನ್‌ಲೋಡ್ ಆಗುತ್ತದೆ.
ಪದವಿ ಪೂರ್ವ ಶಿಕ್ಷಣ ಮಂಡಳಿಯ ಪ್ರಥಮ ಪಿಯುಸಿ ಪರೀಕ್ಷೆಗಳ ಹಿಂದಿನ ವರ್ಷದ ಪತ್ರಿಕೆಗಳನ್ನು ಪರಿಹರಿಸುವುದು ವಿದ್ಯಾರ್ಥಿಗಳಿಗೆ ಅವರ ವಾರ್ಷಿಕ ಪರೀಕ್ಷೆಯ ತಯಾರಿಗಾಗಿ ಹಲವು ರೀತಿಯಲ್ಲಿ ಸಹಾಯ ಮಾಡುತ್ತದೆ. ಮಾದರಿ/ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆಗಳನ್ನು ಪರಿಹರಿಸುವ ಅನುಕೂಲಗಳನ್ನು ಕೆಳಗೆ ಪಟ್ಟಿ ಮಾಡಲಾಗಿದೆ:
ಪ್ರಥಮ ಪಿಯುಸಿ ಪ್ರಶ್ನೆ ಪತ್ರಿಕೆಗಳನ್ನು ಪರಿಹರಿಸುವುದು ವಾರ್ಷಿಕ ಪರೀಕ್ಷೆಯಲ್ಲಿ ಎಷ್ಟು MCQ ಗಳು, ದೀರ್ಘ ಉತ್ತರಗಳ ಪ್ರಶ್ನೆಗಳು ಮತ್ತು ಸಣ್ಣ ಉತ್ತರಗಳ ಪ್ರಶ್ನೆಗಳನ್ನು ಕೇಳಲಾಗುತ್ತದೆ ಎಂಬ ದೃಷ್ಟಿಕೋನದಲ್ಲಿ ಪ್ರಶ್ನೆ ಪತ್ರಿಕೆ ಮಾದರಿಯನ್ನು ಅರ್ಥಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಸಹಾಯ ಮಾಡುತ್ತದೆ.
ಪ್ರಶ್ನೆ ಪತ್ರಿಕೆಯನ್ನು ಪರಿಹರಿಸುವ ಮೂಲಕ, ಯಾವ ವಿಭಾಗವು ಹೆಚ್ಚು ಅಂಕಗಳನ್ನು ಹೊಂದಿದೆ ಮತ್ತು ಯಾವ ವಿಭಾಗವು ಕಡಿಮೆ ಅಂಕಗಳನ್ನು ಹೊಂದಿದೆ ಎಂಬುದನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳುತ್ತಾರೆ.
ಹಿಂದಿನ ವರ್ಷಗಳ ಪತ್ರಿಕೆಗಳನ್ನು ಪರಿಹರಿಸುವುದು ವಿದ್ಯಾರ್ಥಿಗಳಿಗೆ ತಮ್ಮ ಸಮಯ ನಿರ್ವಹಣೆಗೆ ಸಹಾಯ ಮಾಡುತ್ತದೆ. ವಾರ್ಷಿಕ ಪರೀಕ್ಷೆಗಳ ಸಮಯದಲ್ಲಿ, ವಿದ್ಯಾರ್ಥಿಗಳು ಯಾವ ವಿಭಾಗವನ್ನು ಮೊದಲು ಪರಿಹರಿಸಬೇಕು ಮತ್ತು ಯಾವ ವಿಭಾಗವನ್ನು ಕೊನೆಯಲ್ಲಿ ಪರಿಹರಿಸಬೇಕು ಎಂದು ಈ ಮೂಲಕ ಕಲಿತುಕೊಳ್ಳುತ್ತಾರೆ.
ಹಿಂದಿನ ವರ್ಷದ ಪ್ರಶ್ನೆ ಪತ್ರಿಕೆಗಳನ್ನು ಪರಿಹರಿಸುವುದರಿಂದ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆಗಳ ಕ್ಲಿಷ್ಟತೆಯನ್ನು ಅರ್ಥಮಾಡಿಕೊಳ್ಳಬಹುದು. ಯಾವ ರೀತಿಯ ಪ್ರಶ್ನೆಗಳನ್ನು ಕೇಳಲಾಗುತ್ತದೆ ಮತ್ತು ಅವು ಎಷ್ಟು ಕ್ಲಿಷ್ಟಕರವಾಗಿರಬಹುದು ಎಂಬುದನ್ನು ವಿದ್ಯಾರ್ಥಿಗಳು ತಿಳಿದುಕೊಳ್ಳುತ್ತಾರೆ. ಇದರಿಂದಾಗಿ ವಿದ್ಯಾರ್ಥಿಗಳು ಯಾವುದೇ ಗೊಂದಲವಿಲ್ಲದೆ ನಿಜವಾದ ಪ್ರಶ್ನೆ ಪತ್ರಿಕೆಯನ್ನು ಎದುರಿಸುವುದು ಸಾಧ್ಯವಾಗುತ್ತದೆ.
ಪ್ರಥಮ ಪಿಯುಸಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪರೀಕ್ಷೆಯ ಪ್ರಶ್ನೆಗಳನ್ನು ಅಭ್ಯಾಸ ಮಾಡಿ
ಪ್ರಶ್ನೆ. 1: ಪ್ರಥಮ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆ 2022 ಅನ್ನು ಉತ್ತರಗಳೊಂದಿಗೆ ನಾನು ಎಲ್ಲಿಂದ ಪಡೆಯಬಹುದು?
ಉತ್ತರ: ಪ್ರಥಮ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಹುಡುಕುತ್ತಿರುವ ಅಭ್ಯರ್ಥಿಗಳು ಈ ಪುಟದಿಂದ ಅಥವಾ ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು.
ಪ್ರಶ್ನೆ. 2: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಮಂಡಳಿಯ 2022ರ ಪ್ರಥಮ ಪಿಯುಸಿ ಪ್ರಶ್ನೆ ಪತ್ರಿಕೆಗಳನ್ನು ಡೌನ್‌ಲೋಡ್ ಮಾಡಲು ನಾನು ಲಾಗ್ ಇನ್ ಆಗಬೇಕೆ?
ಉತ್ತರ: ಇಲ್ಲ, ವಿದ್ಯಾರ್ಥಿಗಳು 2022ರ ಪ್ರಥಮ ಪಿಯುಸಿ ಪ್ರಶ್ನೆ ಪತ್ರಿಕೆಗಳನ್ನು ಡೌನ್‌ಲೋಡ್ ಮಾಡಲು ಲಾಗ್ ಇನ್ ಆಗುವ ಅಗತ್ಯವಿಲ್ಲ.
ಪ್ರಶ್ನೆ. 3: 2022 ರ ಪ್ರಥಮ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆಯನ್ನು ಯಾವ ವಿಷಯಗಳಿಗೆ ಬಿಡುಗಡೆ ಮಾಡಲಾಗಿದೆ?
ಉತ್ತರ: ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಜೀವಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕನ್ನಡ, ಕಂಪ್ಯೂಟರ್ ಸೈನ್ಸ್ ಮತ್ತು ಗೃಹ ವಿಜ್ಞಾನದ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಇಲಾಖೆಯು ಬಿಡುಗಡೆ ಮಾಡಿದೆ.
ಪ್ರಶ್ನೆ. 4: ಇಲಾಖೆ ನಿರ್ವಹಿಸುವ ಪರೀಕ್ಷೆಯ ಮಾದರಿಯಲ್ಲಿ ಏನಾದರೂ ಬದಲಾವಣೆ ಇದೆಯೇ?
ಉತ್ತರ: ಹೌದು, ಪಿಯುಸಿ ಪರೀಕ್ಷೆಯ ಮಾದರಿಯಲ್ಲಿ ಪ್ರಮುಖ ಬದಲಾವಣೆಗಳಿವೆ. ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆ ಪರೀಕ್ಷೆಯಲ್ಲಿ ಪರಿಚಯಿಸಲಾದ ಬದಲಾವಣೆಗಳನ್ನು ತಿಳಿಯಲು ವಿದ್ಯಾರ್ಥಿಗಳು ಪ್ರಥಮ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಉಲ್ಲೇಖಿಸಲು ಸಲಹೆ ನೀಡಲಾಗುತ್ತದೆ.
ಪ್ರಶ್ನೆ. 5: ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಥಮ ಪಿಯುಸಿ ಮಾದರಿ ಪತ್ರಿಕೆಗಳನ್ನು ಯಾವಾಗ ಬಿಡುಗಡೆ ಮಾಡುತ್ತದೆ?
ಉತ್ತರ: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಥಮ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆಗಳು ಈಗ ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿದೆ.
ಪ್ರಶ್ನೆ. 6: ಪ್ರತಿ ಪತ್ರಿಕೆಯ ಉತ್ತೀರ್ಣತೆಯ ಅಂಕಗಳು ಎಷ್ಟು?
ಉತ್ತರ: ಅಭ್ಯರ್ಥಿಗಳು ಉತ್ತೀರ್ಣರಾಗಲು ಪ್ರತಿ ವಿಷಯದಲ್ಲಿ ಕನಿಷ್ಠ 35% ಅಂಕಗಳನ್ನು ಗಳಿಸಬೇಕು.
ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಥಮ ಪಿಯುಸಿ ಪರೀಕ್ಷೆ 2023 ಕುರಿತ ಇತ್ತೀಚಿನ ಸುದ್ದಿ ಮತ್ತು ಅಪ್‌ಡೇಟ್‌ಗಳಿಗಾಗಿ Embibe ಪುಟಕ್ಕೆ ಭೇಟಿ ಮಾಡುತ್ತಿರಿ. “ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯ ಪ್ರಥಮ ಪಿಯುಸಿ ಮಾದರಿ ಪ್ರಶ್ನೆ ಪತ್ರಿಕೆಗಳು” ಕುರಿತ ಈ ಲೇಖನವು ನಿಮಗೆ ಉಪಯುಕ್ತಕರವಾಗಿತ್ತು ಎಂದು ನಾವು ಭಾವಿಸುತ್ತೇವೆ. ಇಂತಹ ಇನ್ನಷ್ಟು ಕಂಟೆಂಟ್‌ಗಾಗಿ Embibe ಪುಟಕ್ಕೆ ಭೇಟಿ ಮಾಡುತ್ತಿರಿ.